ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಕಗ್ಗ (ಒ )

ಒಮ್ಮನಸಿನಿಂದ ನೀನೀ ತತ್ತ್ವವಂ ಗ್ರಹಿಸು ।

ಬ್ರಹ್ಮಲೀಲೆಗೆ ಗೊತ್ತುಗುರಿ ಲೆಕ್ಕವಿಲ್ಲ ।।

ಸುಮ್ಮನಿರು ನಿನ್ನ ಪಾಡನು ಪಡುತ ತುಟಿ ಬಿಗಿದು ।

ನೆಮ್ಮದಿಗೆ ದಾರಿಯಿದು ಮಂಕುತಿಮ್ಮ ।।

 

ಒಡೆಯದಿರು ತಳಹದಿಯ ಸರಿವಡಿಪೆನದನೆಂದು ।

ಸಡಿಲಿಸುವ ನೀಂ ಮರಳಿ ಕಟ್ಟಲರಿತವನೇಂ ।।

ಗಿಡವ ಸರಿ ಬೆಳೆಯಿಸಲು ಬುಡವ ಕೀಳ್ವುದು ಸರಿಯೆ ।

ದುಡುಕದಿರು ತಿದ್ದಿಕೆಗೆ ಮಂಕುತಿಮ್ಮ ।।

 

ಒರ್ವನೇ ನಿಲುವೆ ನೀನುತ್ಕಟಕ್ಷಣಗಳಲಿ ।

ಧರ್ಮಸಂಕಟಗಳಲಿ ಜೀವಸಮರದಲಿ ।।

ನಿರ್ವಾಣದೀಕ್ಷೆಯಲಿ ನಿರ್ಯಾಣಘಟ್ಟದಲಿ ।

ನಿರ್ಮಿತ್ರನಿರಲು ಕಲಿ ಮಂಕುತಿಮ್ಮ ।।

 

ಒಮ್ಮೆ ಹೂದೋಟದಲಿ ಒಮ್ಮೆ ಕೆಳೆಕೂಟದಲಿ ।

ಒಮ್ಮೆ ಸಂಗೀತದಲಿ ಒಮ್ಮೆ ಶಾಸ್ತ್ರದಲಿ ।।

ಒಮ್ಮೆ ಸಂಸಾರದಲಿ ಮತ್ತೊಮ್ಮೆ ಮೌನದಲಿ ।

ಬ್ರಹ್ಮಾನುಭವಿಯಾಗೊ ಮಂಕುತಿಮ್ಮ ।।


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಸುಗಮ ಕನ್ನಡ


ಶ್ರೀ. ಸುಗಮ ಕನ್ನಡ ಅವರಿಂದ ಮತ್ತಷ್ಟು ಲೇಖನಗಳು


pictureಬೀ.ಚಿ ಚಟಾಕೆಗಳು
pictureಗಂಡು-ಹೆಣ್ಣು
pictureಕುಡುಕರು
pictureಕೋರ್ಟ್-ಲಾಯರ್ರು
pictureಅಪ್ಪ-ಮಗ
pictureಭಿಕ್ಷುಕ ಬವಣೆ
pictureಹುಚ್ಚರ ಸಂತೆ
pictureಮೇಷ್ಟ್ರು-ಮಕ್ಳು
pictureಕಚೇರಿ ಜೋಕ್ಸ್
pictureಚರ್ಚಿಲ್

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2019