ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಕಗ್ಗ ( ಪ )

ಪುಣ್ಯದಿಂ ಬಂದ ಸಿರಿ ಮದಮೋಹಗಳ ಮೂಲ ।

ಖಿನ್ನನಾಗಿಪ ಪಾಪಫಲವಾತ್ಮಶುದ್ಧಿ ।।

ಅನ್ಯೋನ್ಯಜನಕಗಳು ಪುಣ್ಯಪಾಪಗಳಿಂತು ।

ಧನ್ಯನುಭಯವ ಮೀರೆ ಮಂಕುತಿಮ್ಮ ।।

 

ಪಿರಿದೆಲ್ಲ ಮತನೀತಿಗಳಿಗಿಂತ ಜೀವಿತವು ।

ನೆರೆಬಂದ ನದಿ ದಡಕೆ ಬಾಗಿ ಪರಿಯುವುದೇಂ ।।

ಧರುಮಸೂಕ್ಷ್ಮದ ತಿಳಿವೆ ಲೋಕಸೂತ್ರದ ಸುಳಿವು ।

ಅರಸು ಜೀವಿತ ಹಿತವ ಮಂಕುತಿಮ್ಮ ।।

 

ಪರಹಿತದ ಮಾತಿರಲಿ ಪರರಿನೇ ಜೀವಿಪನು ।

ನರಜಂತು ಪಶುಪಕ್ಷಿಕೀಟಮೀನ್ಗಳವೋಲ್ ।।

ಪರರಿನೆಳಸದದೇನುನುಂಪರರಿಗುಪಕರಿಪ ।

ತರುಜನ್ಮವಲ ಪುಣ್ಯ ಮಂಕುತಿಮ್ಮ ।।

 

ಪ್ರಾಕ್ತನದ ವಾಸನೆಯೆ ಮನಕೆ ಮೊದಲಿನ ಮಂತ್ರಿ ।

ಯುಕ್ತಿಗಳ ತನಗೊಪ್ಪುವಂತೆ ತಿರುಗಿಪುದು ।।

ಸೂಕ್ತವೆನಿಪುದು ಸಹಜರುಚಿ ತನ್ನ ತರ್ಕವನೆ ।

ಗುಪ್ತದೊಳು ಕುಟಿಲವಿದು ಮಂಕುತಿಮ್ಮ ।।

 

ಪ್ರೇಮಾತಿಶಯವಿರದ ದಾಂಪತ್ಯ ವರ್ಧಿಸದು ।

ವ್ಯಾಮೋಹಕೆಡೆಗೊಟ್ಟೊಡದು ನಿಗಳವಹುದು ।।

ಸಾಮರಸ್ಯವನೆಂತು ಕಾಣ್ಬುದೀ ವಿಷಮದಲಿ ।

ಆಮಿಷದ ತಂಟೆಯಿದು ಮಂಕುತಿಮ್ಮ ।।


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಸುಗಮ ಕನ್ನಡ


ಶ್ರೀ. ಸುಗಮ ಕನ್ನಡ ಅವರಿಂದ ಮತ್ತಷ್ಟು ಲೇಖನಗಳು


pictureಬೀ.ಚಿ ಚಟಾಕೆಗಳು
pictureಗಂಡು-ಹೆಣ್ಣು
pictureಕುಡುಕರು
pictureಕೋರ್ಟ್-ಲಾಯರ್ರು
pictureಅಪ್ಪ-ಮಗ
pictureಭಿಕ್ಷುಕ ಬವಣೆ
pictureಹುಚ್ಚರ ಸಂತೆ
pictureಮೇಷ್ಟ್ರು-ಮಕ್ಳು
pictureಕಚೇರಿ ಜೋಕ್ಸ್
pictureಚರ್ಚಿಲ್

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2019