ದಾಸರಪದ (ಡ)
ಡಂಗುರವ ಸಾರಿ ಹರಿಯ
ಡಂಗುರವ ಸಾರಿ ಹರಿಯ ಡಿಂಗರಿಗರೆಲ್ಲರು ಭೂ
ಮಂಡಲಕ್ಕೆ ಪಾಂಡುರಂಗ ವಿಠಲ ವರದೈವವೆಂದು ಪ
ಹರಿಯು ಮುಡಿದ ಹೂವು ಹರಿವಾಣದೊಳಗಿಟ್ಟುಕೊಂಡು
ಹರುಷದಿಂದ ಹಾಡಿ ಪಾಡಿ ಕುಣಿದು ಚಪ್ಪಾಳಿಕ್ಕುತ ೧
ಒಡಲ ಜಾಗಟೆಯ ಮಾಡಿ ನುಡಿವ ನಾಲಿಗೆಯ ಪಿಡಿದು
ಢಂ ಢಂ ಢಣಾ ಢಣಾರೆಂದು ಹೊಡೆದು ಚಪ್ಪಾಳಿಕ್ಕುತ ೨
ಇಂತು ಜಗಕ್ಕೆಲ್ಲ ಲಕ್ಷ್ಮೀಕಾಂತನಲ್ಲದಿಲ್ಲವೆಂದು
ಸಂತತ ಶ್ರೀ ಪುರಂದರ ವಿಠಲ ಪರದೈವವೆಂದು ೩